suddibindu.in
ಕಾರವಾರ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ , ರಸ್ತೆ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿ ಓರ್ವನ ಮೇಲೆ ಸರ್ಕಾರಿ ಬಸ್ವೊಂದು (Government Bus) ಹರಿದ ಪರಿಣಾಮ ವಿದ್ಯಾರ್ಥಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ.
ಸುನೀಲ್ ಬಂಡರಗರ್ (10) ಸ್ಥಳದಲ್ಲೇ ಮೃತಪಟ್ಟಿರುವ ಬಾಲಕನಾಗಿದ್ದಾನೆ ಈತ ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅತೀವೇಗವಾಗಿ ಬಂದ ಬಸ್ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ಸೆರೆಯಾಗಿದೆ.
ಬಾಲಕ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದ. ಈ ವೇಳೆ ರಸ್ತೆ ದಾಟಲು ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಇದೇ ಸಮಯಕ್ಕೆ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ವಿದ್ಯಾರ್ಥಿ ಮೇಲೆ ಹರಿದಿದೆ. ಇದರಿಂದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ