ಸುದ್ದಿಬಿಂದು ಬ್ಯೂರೋ
ಬೆಳಗಾವಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡದೆ ಅನಾವಶ್ಯಕವಾಗಿ ಚಕ್ಕರ್ ಹಾಕುವ ಶಿಕ್ಷರ ವಿರುದ್ಧ ಯಾವುದೇ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಶಿಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಬೇಕು. ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.
ಶಿಕ್ಷಕರು ಶಾಲೆಯಲ್ಲಿ ಪಾಠ ಮಾಡುವುದನ್ನ ಬಿಟ್ಟು ರಾಜಕಾರಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ.ಎಲ್ಲದರ ಬಗ್ಗೆಯೂ ಮಾಹಿತಿಯನ್ನ ಕಲೆ ಹಾಕುತ್ತಿದ್ದೇನೆ. ಶಿಕ್ಷಕರು ವಿದ್ಯಾರ್ಥಿಳಿಗೆ ಒಳ್ಳೆಯ ಶಿಕ್ಷಣವನ್ನ ನೀಡುವ ಕೆಲಸ ಮಾಡಬೇಕು. ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಿರುವುದು ಕಂಡುಬಂದಲ್ಲಿ ಮುಲ್ಲಾಜಿಲ್ಲದೆ ಅಂತಹ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವುದಾಗಿ ಸಚಿವರು ಎಚ್ಚರಿಸಿದ್ದಾರೆ.
ಇದನ್ನೂ ಓದಿ