ಕಾರವಾರ:ಮಾನಸಿಕ ಅಸ್ವಸ್ಥನಂತೆ ಇರುವ ಹಾಸನ ಮೂಲದ ವ್ಯಕ್ತಿಯೋರ್ವ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿರುವ ಇಂಡಿಯನ್ ಬ್ಯಾಂಕ್ ಎಟಿಎಂಗೆ ನುಗ್ಗಿ ಸೈರನ್ ಒಡೆದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ.

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಎಟಿಎಂಗೆ ನುಗ್ಗಿದ ವ್ಯಕ್ತಿ ಸೈರನ್ ಒಡೆದಿದ್ದಾನೆ. ಬಳಿಕ ಬಾಗಿಲು ಆಟೋಮೆಟಿಕ್ ಆಗಿ ಲಾಕ್ ಆಗಿದೆ. ಸುಮಾರು ಐದು ಗಂಟೆ ಸುಮಾರಿಗೆ ಸಮೀಪದಲ್ಲಿರುವ ಎಸ್ ಬಿ ಐ ಎಟಿಎಂನ ಸೆಕ್ಯುರಿಟಿ ಓರ್ವ ಆತನನ್ನು ಗಮನಿಸಿದ್ದು ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ.

ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಎಟಿಎಂ ಬಾಗಿಲು ತೆಗೆದು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಎಟಿಎಂ ಯಂತ್ರಕ್ಕೆ ಯಾವುದೇ ಹಾನಿಯಾಗಿಲ್ಲ. ಅಲ್ಲದೇ ಹಣ ಕೂಡ ಕಳ್ಳತನವಾಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ