ಸುದ್ದಿಬಿಂದು ಬ್ಯೂರೋ
ಹೊನ್ನಾವರ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಜಿಲ್ಲಾ ಉಸ್ತುವರಿ ಸಚಿವ ಮಂಕಾಳು ವೈದ್ಯ ಅವರು ಹೊನ್ನಾವರದಲ್ಲಿ ಮಾನವ ಸರಪಳಿಗೆ ಕೈಜೋಡಿಸುವ ಮೂಲಕ ಚಾಲನೆ ನೀಡಿದರು.,

ಉತ್ತರಕನ್ನಡ ಜಿಲ್ಲೆಯಲ್ಲಿ ಸುಮಾರು 253 ಕಿಮೀ ಉದ್ದದ ಮಾನವ ಸರಪಳಿ ರಚನೆ ಮಾಡಲಾಗಿದ್ದು, ಹಳಿಯಾಳದ ಮಾವಿನಕೊಪ್ಪದಿಂದ ಭಟ್ಕಳದ ಶಿರೂರು ವರೆಗೆ ಮಾನವ ಸರಪಳಿ ರಚನೆ ಮಾಡಲಾಗಿತ್ತು. ಈ‌ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳು ಸೇರಿ 80 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು.ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆ ಭೋದಿಸಿ ಪ್ರಜಾಪ್ರಭುತ್ವದ ರಕ್ಷಣೆಗೆ ಕರೆ ನೀಡಲಾಯಿತು.

ವಿವಿಧ ವೇಷಭೂಷಣಗಳ ಮೂಲಕ ಜಿಲ್ಲೆಯ ಕಲೆ, ಸಂಸ್ಕೃತಿ ಪ್ರದರ್ಶನ ಮಾಡಲಾಯಿತು.ಕಾರ್ಯಕ್ರಮದ ಅಂಗವಾಗಿ ಸಚಿವ ಮಂಕಾಳು ವೈದ್ಯ ಅವರು ಗಿಡ ನೆಟ್ಟು ನೀರೆರೆದರು.

ಕಾರ್ಯಕ್ರಮದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾಧಿಕಾರಿ ಕೆ‌ ಲಕ್ಷ್ಮೀಪ್ರಿಯಾ, ಸೇರಿದಂತೆ ಜಿಲ್ಲೆ ಅಧಿಕಾರಿಯಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು..

ಇದನ್ನೂ ಓದಿ