ಸುದ್ದಿಬಿಂದು ಬ್ಯೂರೋ
ಬೈಕ್ ಹಾಗೂ ಟಾಟಾ ಏಸ್ ನಡುವೆ ಅಪಘಾತ( ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಸರ್ವಿಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟಿರುವ ಬೈಕ್ ಸವಾರ ಕನಕಗಿರಿ ತಾಲೂಕಿನ ಓಬಳಬಂಡಿ ಗ್ರಾಮದ ನಿವಾಸಿ ಆಗಿರುವ ಬಸವರಾಜ ರುದ್ರಪ್ಪ ಎಂದು ಗುರುತಿಸಲಾಗಿದೆ. ಈತ ತನ್ನ ಬೈಕ್‌ನಲ್ಲಿ ಚಲಿಸುತ್ತಿದ್ದ ವೇಳೆ ಎದುರಿನಿಂದ ಬಂದ ಟಾಟಾ ಏಸ್ ವಾಹನ ಚಾಲಕ ನೇರವಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.ಇದರಿಂದಾಗಿ ಬೈಕ್ ಸವಾರ ಬಸವರಾಜ ಎಂಬುವವರ ತಲೆಗೆ ಹಾಗೂ ಎದೆ ಭಾಗದಲ್ಲಿ ಗಂಭೀರವಾಗಿ ಗಾಯಗೊಂಡು ಆತ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
ಇನ್ನೂ ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಗ್ಗೆ ನಿರಾಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ ಸವಾರನ ಮೃತ ದೇಹವನ್ನ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.
ಗಮನಿಸಿ