ಸುದ್ದಿಬಿಂದು ಬ್ಯೂರೋ
ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಸ್ವಚ್ಛತೆಯೇ ಸೇವೆ-2024ರ ಅಂಗವಾಗಿ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರವಾರ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಸಂಘಟನೆಗಳ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2ರ ವರೆಗೆ 17 ದಿನಗಳ ಕಾಲ ಜಿಲ್ಲೆಯ ನಗರ ಮತ್ತು ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನದ ಅಡಿ ಪ್ರತಿದಿನವೂ ಸ್ವಚ್ಛತೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗುತ್ತಿದೆ.

ಗಮನಿಸಿ