ಸುದ್ದಿಬಿಂದು ಬ್ಯೂರೋ
ಉಡುಪಿ: ಪತಿಯ ಸಂಬಂಧಿಕರೊಬ್ಬರಿಗೆ ಯಕೃತ್ ದಾನ ಮಾಡಲು ಹೋಗಿದ್ದ ಮಹಿಳೆ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ನಡೆದಿದೆ.
ಅರ್ಚನಾ ಕಾಮತ್ (34) ಮಹಿಳೆಯಾಗಿದ್ದಾಳೆ. ಈಕೆ ತನ್ನ ಪತಿಯ ಕುಟುಂಬದ 69 ವರ್ಷ ಹಿರಿಯ ಮಹಿಳೆಗೆ ಯಕೃತ್ತಿನ (Liver) ಕಸಿಗೆ ದಾನಿಯಾಗಲು ಮುಂದಾಗಿದ್ದಳು. ಈ ಸಂಬಂಧ ಅರ್ಚನಾ ಕಾಮತ್ ಅವರು ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.
ಬೆಂಗಳೂರಿನ ಆಸ್ಪತ್ರೆಯಲ್ಲಿ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು, ಅರ್ಚನಾ ಅವರ ಯಕೃತ್ತಿನ ಒಂದು ಭಾಗವನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ. ನಂತರದಲ್ಲಿ ಅರ್ಚನಾ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಕೆಲ ದಿನಗಳ ಬಳಿಕ ಜ್ವರ ಕಾಣಿಸಿಕೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸಾವು ಸಂಭವಿಸಿದೆ.
ಮೃತ ಅರ್ಚನಾ ಅವರು ನಗರದ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು. ಅಕಾಲಿಕ ನಿಧನದಿಂದ ಅರ್ಚನಾ ಅವರ ಸಂಬಂಧಿಕರು, ಆತ್ಮೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ.
ಗಮನಿಸಿ
- ಸ್ಕೂಟಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು : ಮಹಿಳೆ ಸಾವು
- ಬರ್ಗಿಯಲ್ಲಿ ಅದ್ದೂರಿಯಾಗಿ ನಡೆದ ನವರಾತ್ರಿ ಪೂಜೆ
- ಶಿರೂರು ಗುಡ್ಡಕುಸಿತ ಘಟನೆ : ಅರ್ಜುನ್ ಕುಟುಂಬ-ಮುನಾಫ್ ವಿವಾಧ ಸುಖಾಂತ್ಯ
.