ಸುದ್ದಿಬಿಂದು ಬ್ಯೂರೋ
ರಾಯಚೂರು: ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದೂ ಆಗಿದೆ. ಉತ್ತರ ಕನ್ನಡದ (Uttar Kannada) ಮಾಜಿ ಸಂಸದ ಹಾಗೂ ಹಿಂದುತ್ವದ ಫೈರ್ ಬ್ರಾಂಡ್ ನಾಯಕ ಎಂದೇ ಗುರುತಿಸಿಕೊಂಡಿದ್ದ ಅನಂತ್ ಕುಮಾರ್ ಹೆಗಡೆ (Anant Kumar Hegde) ಅವರಿಗೂ ಟಿಕೆಟ್ ತಪ್ಪಿಸಿ ಕಾಗೇರಿ ಅವರಿಗೆ ಟಿಕೆಟ್ ಕೊಡಿಸಿದ್ದು ನಾನೇ ಏನೆಂದು ಛಲವಾದಿ ನಾರಾಯಣ ಸ್ವಾಮಿ ರಿವಿಲ್ ಮಾಡಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಂದಿನ ಹಾಲಿ ಸಂಸದರಾಗಿದ್ದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ತಪ್ಪಿಸಿದ್ದು ಬಿಜೆಪಿ ಕಾರ್ಯಕರ್ತರಿಗೆ ಬೇಸರ ಉಂಟು ಮಾಡಿತ್ತು. ಹಲವು ಬಿಜೆಪಿ ಕಾರ್ಯಕರ್ತರು ಕೇಂದ್ರದ ನಾಯಕರ ವಿರುದ್ಧ ಆಕ್ರೋಶ ಸಹ ಹೊರಹಾಕಿದ್ದರು. ಅವರಿಗೆ ಟಿಕೆಟ್ ಕೊಡಬೇಡಿ ಎಂದು ನಾನೇ ವರಿಷ್ಠರಿಗೆ ಮನವಿ ಮಾಡಿದ್ದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಗಮನಿಸಿ