ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ:ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಸಂಘಟಿಸಿದ 2024-25 ನೇ ಸಾಲಿನ ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಪಾವನಿ ನಾಯ್ಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕುಮಟಾ ತಾಲ್ಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.

ಶಿರಸಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತಳಾಗುವ ಮೂಲಕ ಪಾವನಿ ಈ ಸಾಧನೆ ಮಾಡಿದ್ದಾಳೆ.ಉತ್ತರಕನ್ನಡ ಜಿಲ್ಲೆಯ ಪ್ರತಿ ತಾಲೂಕುಗಳ ಯೋಗಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಪಾವನೊ, ಕುಮಟಾ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿಜೇತೆಯಾಗಿದ್ದಳು.

ಪಾವನಿ ನಾಯ್ಕ ಕುಮಟಾ ತಾಲ್ಲೂಕಿನ ಬರ್ಗಿಯ ಶಿಕ್ಷಕ ದಂಪತಿಗಳಾದ ಮೋಹನ ನಾಯ್ಕ ಹಾಗೂ ಪ್ರಭಾವತಿ ನಾಯ್ಕ ಇವರ ಮಗಳಾಗಿದ್ದು ಕುಮಟಾದ ಪ್ರತಿಷ್ಠಿತ ಸರಸ್ವತಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾಳೆ.ತನ್ನ ನಿರಂತರ ಅಭ್ಯಾಸದಿಂದ ಈ ಸಾಧನೆ ಮಾಡಿದ ಪಾವನಿ, ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗೆಲುವು ಸಾಧಿಸಲಿ ಎಂದು ಕಾಲೇಜಿನ ಉಪನ್ಯಾಸಕವೃಂದ ,ಪಾಲಕರು ಹಾಗೂ ಹಿತೈಷಿಗಳು ಹಾರೈಸಿದ್ದಾರೆ.

ಕಳೆದ ವರ್ಷವೂ ಕೂಡ ಪಾವನಿ ನಾಯ್ಕ ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದನ್ನು ಸ್ಮರಿಸಬಹುದು.

ಗಮನಿಸಿ