ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಮನೆಯಲ್ಲಿದ್ದ ಪತಿ ಹಾಗೂ ಪತ್ನಿಯ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಣಕೋಣ ಸಾಂತೇರಿ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ನಡೆದಿದೆ.
ಘಟನೆಯಲ್ಲಿ ಉದ್ಯಮಿ ವಿನಾಯಕ ನಾಯ್ಕ(58) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ ಇನ್ನೂ ಆತನ ಪತ್ನಿ ವಿಶಾಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದಾಳೆ. ಇವರಿಬ್ಬರೂ ಪುಣೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಇತ್ತಿಚೇಗೆ ಹಣಕೋಣದ ಸಾಂತೇರಿ ದೇವರ ಜಾತ್ರೆಗಾಗಿ ಊರಿಗೆ ಬಂದಿದ್ದು, ಕೆಲ ದಿನಗಳಿಂದ ಇಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ.
ಇಂದು ಬೆಳಿಗ್ಗಿನ ಜಾವ 5ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ವಿನಾಯಕ ನಾಯ್ಕ ಮನೆಯ ಕೋಣೆಯಲ್ಲೇ ಪ್ರಾಣಬಿಟ್ಟಿದ್ದಾನೆ. ಇನ್ನೂ ಆತನ ಪತ್ನಿ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ಚಿತ್ತಾಕುಲ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಗಮನಿಸಿ