ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಕಳೆದ ಅನೇಕ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯೆ,‌ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರ ತಾಯಿ ಶುಭಲತಾ ಅಸ್ನೋಟಿಕರ್ ಅವರು ಇಂದು ನಗರದ ಎಂ ಜಿ ರಸ್ತೆಯಲ್ಲಿ ಇರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ಕಳೆದ ಅನೇಕ ದಿನಗಳಿಂದ ಕಿಡ್ನಿ ಸಮಸ್ಯೆಯಿಂದಾಗಿ ಚಿಕಿತ್ಸೆಗೆ ಒಳಗಾಗಿದ್ದರು.ಬೆಂಗಳೂರು,ಗೋವಾ ಸೇರಿದಂತೆ ಸಾಕಷ್ಟು ಕಡೆಯಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗಿತ್ತು.ಆದರೆ ಇವರಿಗೆ ಕಳೆದ ಕೆಲ ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.‌ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪತಿ ವಸಂತ ಅಸ್ನೋಟಿಕರ ಅವರು ಸಹ ಶಾಸಕರಾಗಿದ್ದರು.‌ಇವರ ಹತ್ಯೆಯಾದ ನಂತರದಲ್ಲಿ ಶುಭಲತಾ ಅಸ್ನೋಟಿಕರ್ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ನಾಳೆ (ಗುರುವಾರ) ಮೃತರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ.

ಗಮನಿಸಿ