ಸುದ್ದಿಬಿಂದು ಬ್ಯೂರೋ ವರದಿ
Karwar:ಕಾರವಾರ : ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಿನ್ನಲೆಯಲ್ಲಿಂದು ನಗರದ ಅಜ್ವೀ ಓಶಿಯನ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನ ಕಾರವಾರ ಶಾಸಕ ಸತೀಶ್ ಸೈಲ್, ಎಂಎಲ್‌ಸಿ ಗಣಪತಿ ಉಳ್ವೇಕರ್ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು
.

ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚಿತ್ರಕಲಾ ಸ್ಪರ್ಧೆ ಹಾಗೂ ತರಬೇತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಶಾಸಕ ಸತೀಶ ಸೈಲ್ ಕ್ಯಾನ್‌ವಾಸ್ ಮೇಲೆ ಚಿತ್ರ ಬಿಡಿಸುವ ಮೂಲಕ ಚಿತ್ರಕಲೆ ಬಿಡಿಸುವ ಕಾರ್ಯಾಗಾರಕ್ಕೆ ವಿನೂತನವಾಗಿ ಚಾಲನೆ ನೀಡಿದರು.

ಕಾರ್ಯಕ್ರಮ‌ ಉದ್ದೇಶಿಸಿ ಮಾತನಾಡಿದ ಶಾಸಕ ಸೈಲ್ ನೆರೆಯ ಗೋವಾ ರಾಜ್ಯಕ್ಕೆ ಹೋಲಿಸಿದರೆ ಉತ್ತರಕನ್ನಡ ಜಿಲ್ಲೆ ವಿಸ್ತೀರ್ಣದಲ್ಲಿ ದೊಡ್ಡದಿದ್ದು ಸಾಕಷ್ಟು ವಿಶಾಲವಾದ ಕಡಲತೀರಗಳ ಜೊತೆಗೆ ಹಲವಾರು ಪ್ರವಾಸಿ ತಾಣಗಳನ್ನ ಒಳಗೊಂಡಿದೆ. ಆದರೆ ಗೋವಾದಂತೆ ಜಿಲ್ಲೆಯ ಪ್ರವಾಸೋದ್ಯಮವನ್ನ ಅಭಿವೃದ್ಧಿಪಡಿಸುವಲ್ಲಿ ಹಿಂದೆ ಬಿದ್ದಿದ್ದು ಜಿಲ್ಲೆಯ ಪ್ರವಾಸೋದ್ಯಮವನ್ನ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಎಲ್ಲರ ಸಹಕಾರದ ಅಗತ್ಯ ಇದೆ ಎಂದರು.

ಗಮನಿಸಿ