Karwar: ಕಾರವಾರ: ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 28ರಂದು ನಡೆದ ಬೆಳಗಾವಿ ವಿಭಾಗ ಮಟ್ಟದ 2024ನೆಯ ದಸರಾ ಕ್ರೀಡಾಕೂಟದಲ್ಲಿ ಮಹಿಳೆಯರ ಚಕ್ರ ಎಸೆತ ಸ್ಪರ್ಧೆಯಲ್ಲಿ 38.15 ಮೀಟರ್ ದೂರ ಚಕ್ರ ಎಸೆಯುವ ಮೂಲಕ ಪ್ರಥಮ ಸ್ಥಾನ, ಹಾಗೂ 11.54 ಮೀಟರ್ ದೂರ ಗುಂಡು ಎಸೆಯುವ ಮೂಲಕ ಪ್ರಥಮ ಸ್ಥಾನ ಪಡೆದ ಉತ್ತರಕನ್ನಡ ಜಿಲ್ಲೆಯ ಕಾರವಾರದ ನಿವೇದಿತಾ ಸಾವಂತ್ ಅಕ್ಟೋಬರ್ 3ರಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ.

ಕಾರವಾರದ ಚಿನ್ನದ ಹುಡುಗಿ ಎಂದೆ ಪ್ರಸಿದ್ಧಿ ಪಡೆದಿರುವ ನಿವೇದಿತಾ ಸಾವಂತ್ ಈ ಹಿಂದೆ ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ, ನ್ಯಾಷನಲ್ ಸ್ಕೂಲ್ ಗೇಮ್ ಫೆಡರೇಷನ್ ವತಿಯಿಂದ ಆಯೋಜಿಸಿದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ 20ಕ್ಕೂ ಹೆಚ್ಚು ಪದಕಗಳನ್ನ ಪಡೆದಿರುತ್ತಾಳೆ, ಡಿಸ್ಕಸ್ ಎಸೆತದಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ನಿವೇದಿತ ಸಾವಂತ್ ಮಾಡಿರುವ ದಾಖಲೆ ಇಲ್ಲಿಯವರೆಗೂ ದಾಖಲೆಯಾಗಿಯೇ ಉಳಿದಿದೆ,

ಹತ್ತನೇ ತರಗತಿಯ ದೈಹಿಕ ಶಿಕ್ಷಣ ಪುಸ್ತಕದಲ್ಲಿ ನಿವೇದಿತಾಳ ದಾಖಲೆಯನ್ನ ಉಲ್ಲೇಖಿಸಲಾಗಿದೆ, ಸ್ಪೋರ್ಟ್ಸ್ ಕೋಟಾದಲ್ಲಿ ಪ್ರತಿಷ್ಠಿತ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜು ತುಮಕೂರಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿಯನ್ನು ಗಳಿಸಿ, ಠಾಣೆಯಲ್ಲಿ ಮಾಸ್ಟರ್ಸ್ ಪದವಿಯನ್ನ ಪಡೆದು ಅಮೇರಿಕಾದ MNC ಕಂಪನಿಯೊಂದರ ಉದ್ಯೋಗಿಯಾಗಿರುವ ನಿವೇದಿತ ಕ್ರೀಡೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದ್ದಾಳೆ,

ಪ್ರಸ್ತುತ ಕ್ರೀಡಾ ತರಬೇತುದಾರರಾದ ಪ್ರಕಾಶ್ ರೇವಣಕರ್ ರವರ ಮಾರ್ಗದರ್ಶನದಲ್ಲಿ ಸಾಧನೆಯನ್ನು ಮಾಡುತ್ತಿದ್ದು ನಿವೇದಿತಾಳ ಕ್ರೀಡಾ ಸಾಧನೆಗೆ ಅಪಾರ ಕ್ರೀಡಾ ಪ್ರೇಮಿಗಳು ಶುಭ ಕೋರಿದ್ದಾರೆ.

ಗಮನಿಸಿ