ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ತಾಲೂಕಾ ಆರ್ಯ ಈಡಿಗ ನಾಮಧಾರಿ ಸಂಘದವರು ಕುಮಟಾ ತಾಲೂಕಾ ವ್ಯಾಪ್ತಿಯ ಆರ್ಯ ಈಡಿಗ ನಾಮಧಾರಿ ಸಮಾಜದ ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲು ಅಕ್ಟೋಬರ್ 6, ಭಾನುವಾರದಂದು ಕುಮಟಾದ ನಾಮಧಾರಿ ಸಭಾಭವನದಲ್ಲಿ “ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ” ಕಾರ್ಯಕ್ರಮವನ್ನು ಏರ್ಪಡಿಸಿದೆ ಎಂದು ಕುಮಟಾ ತಾಲೂಕಾ ಆರ್ಯ ಈಡಿಗ ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ ತಿಳಿಸಿದ್ದಾರೆ.

ಕುಮಟಾ ತಾಲೂಕಾ ವ್ಯಾಪ್ತಿಯ ಆರ್ಯ ಈಡಿಗ ನಾಮಧಾರಿ ಸಮಾಜದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದರೆ ಅಂತವರ ಪ್ರತಿಭೆಯನ್ನು ಗುರುತಿಸಿ ಪುರಸ್ಕರಿಸಲಾಗುವುದು. ಹಾಗೆಯೇ ಕುಮಟಾ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಆರ್ಯ ಈಡಿಗ ನಾಮಧಾರಿ ಸಮಾಜದ ಸಾಧಕರನ್ನು ಗುರುತಿಸಿ ಅಕ್ಟೋಬರ್ 6, ಭಾನುವಾರದಂದು ನಾಮಧಾರಿ ಸಭಾಭವನದಲ್ಲಿ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಎಂದು ಸಂಘದ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಮನಿಸಿ