ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು.ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನ ಕಾರವಾರ ಶಾಸಕ ಸತೀಶ್ ಸೈಲ್, ಎಂಎಲ್‌ಸಿ ಗಣಪತಿ ಉಳ್ವೇಕರ್ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್ ಕ್ಯಾಮೆರಾಮನ್ ಸಾಯಿಕಿರಣ ಬಾಬ್ರೇಕರ್, ವಿಜಯ ಕರ್ನಾಟಕ ಪತ್ರಿಕೆ ಜಿಲ್ಲಾ ವರದಿಗಾರ ಪ್ರಮೋದ್ ಹರಿಕಂತ್ರ, ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ನವೀನ್ ಸಾಗರ ಹಾಗೂ ಸಂಯುಕ್ತ ಕರ್ನಾಟಕ ದಿನಪತ್ರಿಕೆ ಜಿಲ್ಲಾ ವರದಿಗಾರ ವಾಸುದೇವ ಗೌಡ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಟ್ಯಾಗೋರ್ ಪ್ರಶಸ್ತಿಯನ್ನ ಪ್ರದಾನ ಮಾಡಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು ಪತ್ರಕರ್ತರು ಜನಸಾಮಾನ್ಯರ ದನಿಯಾಗಿ ಜನರ ಸಮಸ್ಯೆಗಳನ್ನ ಗಮನಕ್ಕೆ ತಂದಲ್ಲಿ ನಾವೂ ಸಹ ಪೂರಕವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ ಎಂದರು. ಬಳಿಕ ಮಾತನಾಡಿದ ಶಾಸಕ ಸತೀಶ್ ಸೈಲ್ ಪತ್ರಕರ್ತರು ಹಗರಣಗಳನ್ನ ಹೊರತೆಗೆಯುವಲ್ಲಿ ಸಿಐಡಿಯಂತೆ ಕಾರ್ಯನಿರ್ವಹಿಸಿ ಸಮಾಜಕ್ಕೆ ಕೊಡುಗೆ ನೀಡುತ್ತಿದ್ದು ಶಿರೂರು ದುರಂತದಲ್ಲಿ ವಸ್ತುನಿಷ್ಠ ವರದಿಯ ಮೂಲಕ ಕಾರ್ಯಾಚರಣೆ ಸೂಕ್ತ ರೀತಿಯಲ್ಲಿ ನಡೆಯಲು ಸಹಕಾರಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಗಮನಿಸಿ