ಸುದ್ದಿಬಿಂದು ಬ್ಯೂರೋ ವರದಿ
Karwar: ಕಾರವಾರ: ಗ್ಯಾರಂಟಿ ಯೋಜನೆಗಳು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾಗಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸತೀಶ ಪಿ. ನಾಯ್ಕ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಬಡವರಿಗೆ ನೆರವಾಗುವ ಈ ಯೋಜನೆಗಳನ್ನು ಅವರ ಮನೆಯ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯಾಗಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಈ ಯೋಜನೆಯನ್ನು ತಲುಪಿಸುವಲ್ಲಿ ಯಾವುದೇ ವ್ಯತ್ಯಾಸ ಆಗದ ಹಾಗೇ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಗ್ರಹ ಜ್ಯೋತಿ ಯೋಜನೆಯಡಿ ಲಾಭ ಪಡೆಯದೇ ಇರುವಂತಹ ಜಿಲ್ಲೆಯಲ್ಲಿನ ಸರಿಸುಮಾರು 9000 ಬಳಕೆದಾರರಿಗೆ ಯೋಜನೆಯ ಲಾಭವನ್ನು ತಲುಪಿಸುವ ದಿಶೆಯಲ್ಲಿ ಹೆಸ್ಕಾಂ ಅಧಿಕಾರಿಗಳು ಕ್ರಿಯಾಶೀಲರಾಗಲು ಸೂಚಿಸಿದರು. ಅನ್ನಭಾಗ್ಯ ಯೋಜನೆಯಡಿ DBT ಹಣ ಸಮರ್ಪಕವಾಗಿ ಸಂದಾಯವಾಗದೇ ಇರುವುದರ ಬಗ್ಗೆ ದೂರುಗಳು ಬಂದಿದ್ದು ಈ ವಿಷಯದಲ್ಲಿ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಯುವ ನಿಧಿ ಯೋಜನೆಯಡಿ ನೋಂದಣಿಯಾದವರ ಸಂಖ್ಯೆ ಅತಿ ಕಡಿಮೆ ಇದ್ದು ಫಲಾನುಭವಿಗಳಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಯಿತು. ಗ್ರಹಲಕ್ಷ್ಮೀ ಯೋಜನೆಯ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದ್ದು GST ಮತ್ತು Income Taxಪಾವತಿದಾರರು ಎಂದು ತೋರಿಸುತ್ತಿರುವ ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಬೇಕೆಂದು ಸರ್ವಾನುಮತದಿಂದ ನಿರ್ಧರಿಸಲಾಯಿತು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರುಗಳಿಗೆ ಮತ್ತು ಸದಸ್ಯರುಗಳಿಗೆ ID cardನ್ನು ವಿತರಿಸಲಾಯಿತು. ಕಾರ್ಯಕ್ರಮ ವು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸತೀಶ ಪಿ ನಾಯ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ CEO ಈಶ್ವರ ಖಂಡೋ ಮಾತನಾಡಿ ತಾಲೂಕು ಪಂಚಾಯತ್ EOಗಳೊಂದಿಗೆ ಸಮನ್ವಯ ಸಾಧಿಸಿ ತಾಲೂಕು ಮಟ್ಟದಲ್ಲಿ ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಉಪಾಧ್ಯಕ್ಷರಾದ ಪುರುಷೋತ್ತಮ ನಾಯ್ಕ,ಸುಭಾಷ್ ಕಾರ್ವೆಕರ್, ಜನಾರ್ಧನ ದೇವಾಡಿಗ, ಜಿಲ್ಲಾ ಸಮಿತಿಯ ಸದಸ್ಯರಾದ ನಾಗೇಶ್ ಗೌಡ,ಅನಿಲ ದೋಂಡಗಿಲ್, ತಾಲೂಕು ಅಧ್ಯಕ್ಷರುಗಳಾದ ಅಶೋಕ ಗೌಡ,ರಾಜೀವ್ ನಾಯ್ಕ, ಅಣ್ಣಪ್ಪ ನಾಯಕ,ರಾಜೇಂದ್ರ ರಾಣೆ, ಉಲ್ಲಾಸ ಶಾನಭಾಗ, ರಿಯಾಜ್ ಅಹಮದ್, ಕುಮಾರ ಜವಳೇಕರ್,ಕೆ. ಜಿ. ನಾಗರಾಜ ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಗಮನಿಸಿ