ಸುದ್ದಿಬಿಂದು ಬ್ಯೂರೋ ವರದಿ
ಮುರುಡೇಶ್ವರ : ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿಧ್ಯಾರ್ಥಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ…

ಬೆಂಗಳೂರಿನ ವಿಧ್ಯಾಸೌದ ಪ್ರಥಮ ದರ್ಜೆ ಕಾಲೇಜಿನ ವಿಧ್ಯಾರ್ಥಿ.ಗೌತಮ್ (17) ಮೃತ ಪ್ರವಾಸಿ ವಿಧ್ಯಾರ್ಥಿಯಾಗಿದ್ದಾಗಿದ್ದಾನೆ. ಇನ್ನೋರ್ವ ವಿದ್ಯಾರ್ಥಿಯಾಗಿ ಧನುಶ್ ಎಂಬಾತನನ್ನ ಸ್ಥಳೀಯ ಲೈಪ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ..
ಅಸ್ವಸ್ಥವಾದ ಧನುಶ್‌ಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಒಟ್ಟೂ 220 ವಿಧ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು ಸಮುದ್ರದ ಅಲೆಯಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭದಲ್ಲಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿರುವ ಪರಿಣಾಮ ಈ ಘಟನೆ ನಡೆದಿದೆ.ಸ್ಥಳಕ್ಕೆ ಮುರುಡೇಶ್ವರ ಪೋಲಿಸರ ಭೇಟಿ ಪರಿಶೀಲನೆ ನಡೆಸಿದ್ದಾರೆ…

ಗಮನಿಸಿ