ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ‌ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 15ಜಿಲ್ಲೆಯಲ್ಲಿ‌‌ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಯಾಗಿರುವ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಇನ್ನೂಳಿದ‌ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ವಿಜಯನಗರ, ಕೋಲಾರದಲ್ಲಿ ಸಾಧಾರಣ ಮಳೆಯಾಗಲಿದೆ. ನಾಪೋಕ್ಲು, ಬಂಡೀಪುರ, ಕಾರ್ಕಳ, ನರಗುಂದ, ರಾಮನಗರ, ಮಸ್ಕಿ, ಕನಕಪುರ, ಮಾಗಡಿ, ಎಚ್​ಡಿ ಕೋಟೆ, ಮುಂಡಗೋಡು, ಕುಮಟಾ, ಲಕ್ಷ್ಮೇಶ್ವರ, ಕೊಟ್ಟಿಗೆಹಾರ, ಹಾಸನ, ಹೊಸಕೋಟೆ, ಶ್ರವಣಬೆಳಗೊಳ, ಕೋಲಾರ, ತ್ಯಾಗರ್ತಿ, ಪೊನ್ನಂಪೇಟೆ, ಹೊನ್ನಾಳಿ, ಸುಳ್ಯ, ಕಿರವತ್ತಿ, ಉಪ್ಪಿನಂಗಡಿ, ಗಂಗಾವತಿ, ಮೈಸೂರು, ನಾಗಮಂಗಲದಲ್ಲಿ ಮಳೆಯಾಗಿದೆ.

ಗಮನಿಸಿ