ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕಾರು, ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುದಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಕಾರಿನಲ್ಲಿ ಎರಡು ಕುಟುಂಬದ ಎಂಟು ಮಂದಿ ಪ್ರಯಾಣಿಸುತ್ತಿದ್ದರು.ಕಾರಿನ ಏರ್ಬ್ಯಾಗ್ ಒಪನ್ ಆಗಿದ್ದರಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋವಾ ಮೂಲದ ಕಾರು ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಕಾರು ಕಾರವಾರದಿಂದ ಅಂಕೋಲಾ ಕಡೆಗೆ ತೆರಳುತ್ತಿತ್ತು, ಟ್ಯಾಂಕರ್ ಅಂಕೋಲಾ ಮಾರ್ಗದಿಂದ ಕಾರವಾರ ಕಡೆ ಚಲಿಸುತ್ತಿದ್ದ ವೇಳೆ ಅಪಘಾತ ನಡೆದಿದೆ.ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಅವೈಜ್ಞಾನಿಕವಾಗಿರುವ ಹೆದ್ದಾರಿ ಕಾಮಗಾರಿಯಿಂದಾಗಿ ಈ ಅವಘಢ ನಡೆದಿದೆ. ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದ ಐಆರ್‌ಬಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಮನಿಸಿ