ಬೆಂಗಳೂರು : ಕಳೆದ ಅನೇಕ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ (Saroja) ಸಂಜೀವ್ ಅವರನ್ನ ಇಂದು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ನಟ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಸರೋಜಾ ಅಗಲಿದ್ದಾರೆ.ಮಂಗಳೂರು ಮೂಲದವರಾದ ಸುದೀಪ್ ತಾಯಿ ಸರೋಜಾ ಅವರು, ಸಿನಿಮಾ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಸುದೀಪ್ ಅವರ ಅಭಿಮಾನಿಗಳು, ಚಿತ್ರರಂಗದ ಆಪ್ತರು, ಸ್ನೇಹಿತರು ಸರೋಜಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಇಂದು ಮಧ್ಯಾಹ್ನ ಬೆಂಗಳೂರಿನ ಜೆಪಿ ನಗರದಲ್ಲಿರುವ ಸುದೀಪ್ ಅವರ ನಿವಾಸದಲ್ಲಿ ಸರೋಜಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಸಂಜೆ ಅಂತ್ಯಕ್ರಿಯೆ ನೆರವೇರಲಿದೆ.
ಗಮನಿಸಿ
- ಆರ್ಟಿಐ ಹೆಸರಿನಲ್ಲಿ ಕೋಟಿ ಹಣದ ಬೇಡಿಕೆ: ಮುಂಡಗೋಡ-ಹುಬ್ಬಳ್ಳಿ ಗ್ಯಾಂಗ್ ಪೊಲೀಸ್ ಬಲೆಗೆ..!
- ಐದು ವರ್ಷ ಅಪಘಾತವಿಲ್ಲ.!ಭಟ್ಕಳದ ಚಾಲಕ ರಾಮಚಂದ್ರ ನಾಯ್ಕ ಅವರಿಗೆ ಬೆಳ್ಳಿ ಪದಕದ ಗೌರವ
- ನ್ಯಾಯ ಸಿಗದಿದ್ದರೆ ಬಸ್ಸ್ಟ್ಯಾಂಡ್ನಲ್ಲಿ ಧರಣಿ : ಆಟೋ ಚಾಲಕರಿಂದ ಎಚ್ಚರಿಕೆ




