ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಧಿಸಿ ಕಾರವಾರ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿದೆ. ಈ ವಿಚಾರವಾಗಿ ಶಾಸಕ ಸೈಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಸತೀಶ್ ಸೈಲ್ ಅವರು ನ್ಯಾಯಾಲಯದ ತೀರ್ಪಿಗೆ ನಾನು ಬದ್ದ ಎಂದಿದ್ದಾರೆ.

ಅದಿರು ನಾಪತ್ತೆ ಪ್ರಕರಣದ ವಿಚಾರವಾಗಿ ಇಂದು ಬೆಂಗಳೂರಿನ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಅದಿರು ಪ್ರಕರಣದಲ್ಲಿ ಶಾಸಕ ಸೈಲ್ ದೋಷಿ ಎಂದು ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣ ನಾಳೆ ಕಾಯ್ದಿರಿಸಲಾಗಿದೆ. ಆದರೆ ಶಿಕ್ಷೆ ಪ್ರಟಕವಾಗುವ ತನಕ ಬಂಧನಕ್ಕೆ ಒಪ್ಪಿಸದಂತೆ ಸೈಲ್ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ತೀರ್ಪು ಪ್ರಕಟವಾದ ಬಳಿಕ ಅವಕಾಶವಿಲ್ಲ ಎಂದು ನ್ಯಾಯಾಧೀಶರು ಮನವರಿಕೆ ಮಾಡಿದ್ದಾರೆ.

ನ್ಯಾಯಾಲಯದ ತೀರ್ಪಿನ ಬಳಿಕ ಶಾಸಕ ಸೈಲ್‌ಗೆ ಸಿಬಿಐ ಅಧಿಕಾರಿಗಳು ಕರೆದುಕೊಂಡು ಹೋಗುವ ವೇಳೆ ಮಾಧ್ಯಮದವರಿಗೆ ಪ್ರತಿಕ್ರೀಯೆ ನೀಡಿದ ಶಾಸಕ ಸೈಲ್ ನ್ಯಾಯಾಲಯ‌ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಗಮನಿಸಿ