ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಹಾಲಿ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದ್ದು,ನಾಳೆ ಶಿಕ್ಷೆ ಪ್ರಮಾಣವನ್ನ ಕಾಯ್ದಿರಿಸಲಾಗಿದೆ.

2010ರಲ್ಲಿ ನಡೆದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಆರು ಪ್ರಕರಣದಲ್ಲಿ ಇಂದು ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ, ಶಾಸಕ ಸತೀಶ್‌ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಲಿಯಾ ಸೇರಿ ಹಲವರ ವಿರುದ್ಧ ಕೇಸ್‌ ದಾಖಲಾಗಿತ್ತು.‌ ಇದೀಗ ಶಾಸಕ ಸೈಲ್ ಸೇರಿ ಎಲ್ಲಾ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.

ಬೇಲೆಕೇರಿ ಅದಿರು ನಾಪತ್ತೆಗೆ ಸಂಬಂಧಿಸಿ ಸಿಬಿಐನಲ್ಲಿ ಆರು ಪ್ರಕರಣಗಳು ದಾಖಲಾಗಿದ್ದವು, ಇದಕ್ಕೆ ಸಂಬಧಿಸಿ ತನಿಖೆ ನಡೆಸಿದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ಈ ಬಗ್ಗೆ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ‌ ಸಂತೋಷ‌ ಗಜಾನನ ಭಟ್, ಅಂತಿಮ‌ ಆದೇಶವನ್ನ ಹೊರಡಿಸಿದ್ದಾರೆ.

ಗಮನಿಸಿ