ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿಟ್ಟ ಲಾರಿ ಒಂದಕ್ಕೆ ಬೈಕ್ ಡಿಕ್ಕಿ ಹೊಡೆದು ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಮೃತಪ್ಪಟ್ಟಿರುವ ಘಟನೆ ಹಾರುಗಾರ ಬಳಿ ನಡೆದಿದೆ.
ಶಿರಸಿ ಎಂ. ಇ. ಎಸ್. ಆರ್. ಎನ್. ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯ ಮೊದಲ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿಧ್ಯಾರ್ಥಿ ಮನೋಜ್ ಜಿ. ಹೆಗಡೆ ಮೃತ ವಿದ್ಯಾರ್ಥಿಯಾಗಿದ್ದಾನೆ.
ಬೆಳಿಗ್ಗೆ ಪರೀಕ್ಷೆ ಬರೆಯಲು ಮನೆಯಿಂದ ಶಿರಸಿಗೆ ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿ ನಿಲ್ಲಿಸಿಟ್ಟ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು ಮೃತ ಪಟ್ಟಿದ್ದಾನೆ. ಶಿರಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ..
ಗಮನಿಸಿ