ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಐದು ತಿಂಗಳಿಂದ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಇದೀಗ ಹೈಕೋರ್ಟ್‌ನಿಂದ ಆರು ವಾರಗಳ ಕಾಲ ಷರತ್ತು ಬದ್ದ ಜಾಮೀನು ನೀಡಿ ಬಿಡುಗಡೆ ಮಾಡಿದ್ದು, ಡಿ ಬಾಸ್ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 22ರಂದು ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು. ಬಳಿಕ ಅಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನುವ ಕಾರಣಕ್ಕೆ ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರಿಗೆ ಚಿಕಿತ್ಸೆ ಅನಿವಾರ್ಯವಾಗಿದೆ ಅಂತಾ ವೈದ್ಯರು ನೀಡಿದ ವರದಿ ಆದರಿಸಿ ದರ್ಶನ್ ಪರ ವಕೀಲ‌ ಸಿ ವಿ ನಾಗೇಶ ಅವರು ವಾದಮಂಡಿದ್ದು, ವಾದ ಪ್ರತಿವಾದ ಆಲಿಸಿದ್ದ ನ್ಯಾ.ಇಂದು ನಟ ದರ್ಶನ್‌ಗೆ ಷರತ್ತು ಬದ್ದ ಜಾಮೀನು ನೀಡಿದೆ.

ಗಮನಿಸಿ