ಸುದ್ದಿಬಿಂದು ಬ್ಯೂರೋ ವರದಿ
Karwar: ಕಾರವಾರ: ಮೀನುಗಾರಿಕೆಗೆ ಹೋಗಿದ್ದ ವೇಳೆ ನದಿಯಲ್ಲಿ ಮುಳುಗಡೆಯಾಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಇಂದು ಶನಿವಾರ ಲೇಡಿಸ್ ಬೀಚ್‌ನಲ್ಲಿ ಪತ್ತೆಯಾಗಿದೆ.
ಗಜಾನನ ಗೌಡ ಎಂಬಾತ ಮೀನುಗಾರಿಕೆಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದ, ಬಳಿಕ ಕುಟುಂಬಸ್ಥರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದ್ದರು ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಕರಾವಳಿ ಕಾವಲು ಪಡೆಯ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಹುಡುಕಾಟ ನಡೆಸಿದ್ದು, ಕರಾವಳಿ ಕಾವಲು ಪಡೆಯ ಪೊಲೀಸರು ಕಾರ್ಯಚರಣೆ ನಡೆಸುವ ವೇಳೆ ನಾಪತ್ತೆಯಾಗಿದ್ದ ಗಜಾನನ ಗೌಡ ಎಂಬಾತನ ಶವ ಪತ್ತೆಯಾಗಿದೆ.
ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪತ್ತೆಯಾದ ಗಜಾನನ ಗೌಡ ಮೃತ ದೇಹವನ್ನ ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಹೆಚ್ಚಿನ ಸುದ್ದಿಗಾಗಿ ಇದನ್ನೂ ಓದಿ