ಸುದ್ದಿಬಿಂದು ಬ್ಯೂರೋ ವರದಿ
Karwar: ಕಾರವಾರ: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಕಣ್ಮರೆಯಾದ ಲೋಕೇಶ್ ಮತ್ತು ಜಗನ್ನಾಥ ಕುಟುಂಬದವರಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಲಾ ರೂ.5 ಲಕ್ಷ ಪರಿಹಾರವನ್ನು ವಿತರಿಸಿದರು.
ಜುಲೈ16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡಕುಸಿತ ಉಂಟಾಗಿ ಒಟ್ಟು ಹನ್ನೊಂದು ಮಂದಿ ಮೃತಪಟ್ಟಿದ್ದರು, ಅದರಲ್ಲಿ 9 ಮಂದಿ ಶವ ಪತ್ತೆಯಾಗಿತ್ತು. ಇನ್ನಿಬ್ಬರಾದ ಜಗನ್ನಾಥ ನಾಯ್ಕ ಹಾಗೂ ಲೋಕೇಶ ಅವರ ಶವ ಪತ್ತೆಯಾಗಿರಲ್ಲ. ಹೀಗಾಗಿ. ಶವ ಪತ್ತೆ ಆಗದೆ ಇದ್ದರು ಸಹ ಕುಟುಂಬಸ್ಥರಿಂದ ಪತ್ರ ಬರೆಸಿಕೊಂಡು ಸರಕಾರದ ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಸ್ಥಳೀಯ ಶಾಸಕ ಸತೀಶ ಸೈಲ್ ಅಂದು ಆ ಎರಡು ಕುಟುಂಬಕ್ಕೆ ಭರವಸೆ ನೀಡಿದ್ದರು. ಅದರಂತೆ ಇಂದು ಎರಡು ಕುಟುಂಬಸ್ಥರಿಗೂ ಸಹ ಸರಕಾರದಿಂದ ತಲಾ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಣೆ ಮಾಡಿದ್ದರು..
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ ಮಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಉಪಸ್ಥಿತರಿದ್ದರು.
ಗಮಿನಿಸಿ