ಸುದ್ದಿಬಿಂದು ಬ್ಯೂರೋ ವರದಿ(suddibindu Digital News)
Tumkur:ತುಮಕೂರು. ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಮರಕ್ಕೆ ಡಿಕ್ಕಿ(car accident)ಹೊಡೆದು ಭೀರಕರವಾದ ಅಪಘಾತ ನಡೆದಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ರಾಜ್ಯ ಹೆದ್ದಾರಿ 33 ರಲ್ಲಿರುವ ರಾಜೇಂದ್ರ ಪುರ ಗೇಟ್ ಬಳಿ ನಡೆದಿದೆ.

ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು. ಮರಕ್ಕೆ ಗುದಿದ ರಭಸಕ್ಕೆ ಕಾರಿನಲ್ಲಿದ್ದ ಓರ್ವ ಸಾವು, ಮೂವರಿಗೆ ಗಂಭೀರ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು, ತುಮಕೂರಿನಲ್ಲಿ ಮದುವೆ ಮುಗಿಸಿ ಮಂಡ್ಯ ಕಡೆಗೆ ತೆರಳುತ್ತಿದ್ದರು.ಈ ವೇಳೆ ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು , ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು,ಪ್ರಕರಣ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಮನಿಸಿ