ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದ್ದು. ಶೀಘ್ರದಲ್ಲಿ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ರಾಜ್ಯದ ಕಾಲೇಜುಗಳಲ್ಲಿ 800 ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಹಾಗೂ 15000 ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ನೇಮಕಾತಿ ಮಾಡಲಾಗುವುದು ಎಂದಿರುವ ಮಧು ಬಂಗಾರಪ್ಪ ಅವರು ಶಿಕ್ಷಕರ ನೇಮಕಾತಿ ಬಗ್ಗೆ ಸಿಎಂ ಸಿದ್ದಿರಾಮಯ್ಯ ಸಹ ಒಪ್ಪಿಗೆ ಸೂಚಿಸಿದ್ದು, ರಾಜ್ಯದಲ್ಲಿ ಶಿಕ್ಷಕರ ಕೊರತೆ ಇರುವ ಕಾರಣ ಅತೀ ಶೀಘ್ರದಲ್ಲಿಯೇ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾ,ರೆ.
ಗಮನಿಸಿ.