ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ:ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಾಷ್ಟ್ರೀಯ ಹೆದ್ದಾರಿ 766-ಇ ಕುಮಟ-ಶಿರಸಿ ರಸ್ತೆ ಕಾಮಗಾರಿಗಾಗಿ ಪ್ರಾರಂಭವಾಗಲಿರುವ ಹಿನ್ನಲೆಯಲ್ಲಿ ಡಿ.2 ರಿಂದ ಕುಮಟಾ ಶಿರಸಿ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ಬಂದ್‌ ಆಗಲಿದೆ.

ಕಾಮಗಾರಿಯನ್ನ ನಿಗದಿತ ಸಮಯದೊಳಗೆ ಮುಗಿಸಬೇಕಾಗಿರುವ ಕಾರಣ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಿ ಬದಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕುಮಟಾ–ಶಿರಸಿ ಮೂಲಕ ಸಿದ್ದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಂಕೋಲ– ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63 ಮತ್ತು ರಾಜ್ಯ ಹೆದ್ದಾರಿ 93 ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಬಹುದಾಗಿದೆ. ಮಂಗಳೂರು-ಸಿರಸಿ ಮೂಲಕ ಸಿದ್ದಾಪುರ ಮಾವಿನಗುಂಡಿ ಮಾರ್ಗವಾಗಿ ಎಲ್ಲಾ ವಾಹನಗಳು ಸಂಚರಿಸಬಹುದಾಗಿದೆ.

ಆದ್ದರಿಂದ ರಾಷ್ಟ್ರೀಯ ಹೆದ್ದಾರಿ 766ಇ ಕುಮಟಾ ಶಿರಸಿ ಹೆದ್ದಾರಿಯಲ್ಲಿನ ಕಾಮಗಾರಿ ಸಮಯದಲ್ಲಿ ಜಿಲ್ಲಾಧಿಕಾರಿಗಳು ಸೂಚಿಸಿರುವ ಬದಲಿ ಮಾರ್ಗದಲ್ಲಿ ಸಂಚರಿಸಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿಗಳಾದ ಎಂ ನಾರಾಯಣ ಕೋರಿದ್ದಾರೆ.

ಗಮನಿಸಿ