ಸುದ್ದಿಬಿಂದು ಬ್ಯೂರೋ ವರದಿ (SuddiBindu digital news)
ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ವಾಪಸ್ ಆಗುತ್ತಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಡೆಡ್ಲಿ ಅಟ್ಯಾಕ್ ಮಾಡಿರುವ ಘಟನೆ
ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ‌ ನಡೆದಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿ ಸೈಯದ್ ಇಶಾನ್ ಎಂಬಾತನ ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಹತ್ತಕ್ಕೂ ಹೆಚ್ಚು ದುಷ್ಕರ್ಮಿಗಳು ವಿದ್ಯಾರ್ಥಿಯನ್ನ ತಡೆದು ಲಾಂಗು,ಮಚ್ಚು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ, ಹಲ್ಲೆಗೊಳಗಾದ ವಿದ್ಯಾರ್ಥಿ ಇಶಾನ್ ಕೈ ಬೆರಳು ಕಟ್ ಆಗಿದ್ದು, ಉಳಿದ ಭಾಗದಲ್ಲಿ ಗಂಭೀರವಾದ ಗಾಯವಾಗಿದೆ.ಗಾಯಗೊಂಡ ವಿದ್ಯಾರ್ಥಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.

ಖಾದೀರ್ , ಫಾರಜ್ , ಮಸ್ತಾನ್ , ನವಾಜ್ ಸೇರಿದಂತೆ 9ಜನರ ವಿರುದ್ಧ ವಿದ್ಯಾರ್ಥಿಯ ಪಾಲಕರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಕೃತ್ಯ ನಡೆಸಿರು ಆರೋಪಿಗಳನ್ನ ಶೀಘ್ರದಲ್ಲಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಗಮನಿಸಿ