ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಲಿದೆ ಎಂದು ಮಾಧ್ಯಮಗಳು ಸುದ್ದಿ ಪ್ರಕಟಿಸುತ್ತಿದ್ದು, ಸದ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರವಿಲ್ಲ.ಇದೇಲ್ಲವು ಮಾಧ್ಯಮಗಳ ಸೃಷ್ಠಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ಸಂಭವನೀಯ ಸಚಿವರ ಪಟ್ಟಿಯನ್ನೂ ಸಹ ಪ್ರಕಟಿಸಲಾಗುತ್ತಿದೆ. ಸಚಿವ ಸಂಪುಟ ಬದಲಾವಣೆ ಆಗಲಿದೆ ಎನ್ನುವುದಂತು ಇಲ್ಲ. ದೆಹಲಿಗೆ ಹೋಗಿರುವ ವಿಚಾರವೆ ಬೇರೆ. ಆದರೆ ಮಾಧ್ಯಮಗಳು ಸಚಿವ ಸಂಪುಟ ಪುನರ್ ರಚನೆ ಆಗಲಿದೆ ಎಂದು ಸುದ್ದಿ ಪ್ರಕಟಿಸುತ್ತಿದೆ.ಈ ಎಲ್ಲಾ ಪ್ರಶ್ನೆಗಳಿಗೆ ಮಾಧ್ಯಗಳೆ ಉತ್ತರಿಸಬೇಕು ಎಂದಿದ್ದಾರೆ.
ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಅದು ಸಗ ಸದ್ಯ ಆಗಲ್ಲ ಎಂದಿದ್ದಾರೆಂದು ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಸಿ ಎಂ ಸಿದ್ದರಾಯ್ಯ ಪ್ರತಿಕ್ರಿಯಿಸಿದ್ದಾರೆ.
ಗಮನಿಸಿ