ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ: ಇಲ್ಲಿನ ಕುಡ್ಲೆ ಬೀಚ್‌ನಲ್ಲಿ ಈಜುತ್ತಿದ್ದ ವೇಳೆ ಅಪಾಯಕ್ಕೆ ಸಿಲುಕಿದ ವಿದೇಶಿ ಪ್ರವಾಸಿ ಮಹಿಳೆಯನ್ನ ಲೈಪ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.
ಫ್ರಾನ್ಸ್ ದೇಶದ ಧನ್ಯ ಗೋಕರ್ಣ ಪ್ರವಾಸಕ್ಕೆ ಬಂದಿದ್ದು. ಇಲ್ಲಿನ ಕುಡ್ಲೆ ಬೀಚ್‌ನಲ್ಲಿ ಈಜಲು ಹೋಗಿದ್ದ ವೇಳೆ ಸಮುದ್ರದ ಅಲೆಗೆ ಸಿಲುಕಿಕೊಂಡಿದ್ದರು. ಈ ಸಮಯದಲ್ಲಿ ಕರ್ತವ್ಯದಲ್ಲಿದ್ದ ಜೀವರಕ್ಷಕ ಸಿಬ್ಬಂದಿಗಳಾದ ನಾಗೇಂದ್ರ ಎಸ್.ಕುರ್ಲೆ, ಪ್ರದೀಪ ಅಂಬಿಗ ಮಹಿಳೆ ಅಪಾಯದಲ್ಲಿರುವುದನ್ನ ಗಮನಿಸಿದ್ದು ತಕ್ಷಣ ರಕ್ಷಣೆಗೆ ಧಾವಿಸಿ ಪ್ರಾಣಾಪಾಯದಿಂದ ಮಹಿಳೆಯನ್ನ ಪಾರು ಮಾಡಿದ್ದಾರೆ.
ಇವರಿಗೆ ಮೈಸ್ಟಿಕ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ಜೆಟ್ಲಿಯೊಂದಿಗೆ ಜೊತೆಯಾಗಿದ್ದು, ಪ್ರವಾಸಿ ಮಿತ್ರ ಶೇಖರ ಹರಿಕಂತ್ರ ಸಹಾಯದೊಂದಿಗೆ ಮಹಿಳೆಯ ಜೀವ ಉಳಿಸಿದ್ದಾರೆ. ತಮ್ಮ ಜೀವದ ಹಂಗು ತೊರೆದು ಜೀವ ಉಳಿಸಿದ ಜೀವರಕ್ಷಕ ಸಿಬ್ಬಂದಿ ಮತ್ತು ಅವರ ತಂಡಕ್ಕೆ ಸಾರ್ವಜನಿಕರು ಅಭಿನಂದಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಗಮನಿಸಿ
- Comedy Khiladigalu/ಕಾಮಿಡಿ ಕಿಲಾಡಿ’ ಚಂದ್ರಶೇಖರ್ ಸಿದ್ದಿ ಸಾವಿನ ಹಿಂದೆ ಪತ್ನಿಯ ಕಿರುಕುಳ ? ವಿಡಿಯೋ ವೈರಲ್
- ಅಕ್ರಮ ದಂಧೆಕೋರರರ ಪರ ನಿಂತ ಕನ್ನಡ ಪರ ಸಂಘಟನೆ ಅಧ್ಯಕ್ಷ : PSI ಎತ್ತಂಗಡಿಗೆ ಸಂಚು
- Teacher suspended/ವಿದ್ಯಾರ್ಥಿಗೆ ಥಳಿಸಿದ ಪ್ರಕರಣ : ಶಿಕ್ಷಕಿ ಅಮಾನತು.
- Varamahalakshmi Festival, ಶ್ರಾವಣದ ಶುಕ್ರವಾರ, ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಭಕ್ತಿ ಸಡಗರ