ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಈ ಮೊದಲು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಸದ್ಯ ಹಳೇ ಹುಬ್ಬಳ್ಳಿ ಠಾಣೆಯ
ಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುರೇಶ್ ಯಳ್ಳೂರ್ ಅವರು ಠಾಣೆಯಲ್ಲಿನ ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ಹಾಗೂ ಕೆಲವು ಸಹೋದ್ಯೋಗಿಗಳಿಗೆ ಕೆಲಸದ ವಿಚಾರಕ್ಕೇ ಕಿರುಕುಳ ನೀಡುತ್ತಿದ್ದಾರೆ ಎಂಬ ಅನಾಮದೇಯ ಪತ್ರ ವೈರಲ್ ಆಗಿತ್ತು. ಈ ಬಗ್ಗೆ ತನಿಖೆಯಲ್ಲಿ ಯಾವುದೇ ಪೂರಕ ಅಂಶ ಖಂಡು ಬಂದಿಲ್ಲ ಎಂದು ಕಮಿಷನರ್ ಎನ್ ಶಶಿಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಈ ವಿಚಾರಕ್ಕೇ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ ನಿನ್ನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಮಹಿಳಾ ಮತ್ತು ಬೇರೆ ಸಿಬ್ಬಂದಿಗಳನ್ನು ವಿಚಾರಣೆ ಮಾಡಿದಾಗ ಪತ್ರದಲ್ಲಿ ಬರೆದಿರುವ ಪ್ರಕಾರ ಇನ್ಸ್ಪೆಕ್ಟರ್ ಸುರೇಶ ಅವರ ಮೇಲೆ ಮಾಡಿದ ಆರೋಪಕ್ಕೆ ಪೂರಕವಾದ ದಾಖಲೆ ಹಾಗೂ ಮಾಹಿತಿ ಲಭ್ಯವಾಗಿಲ್ಲ.ಠಾಣೆಯಲ್ಲಿರುವ ಮಹಿಳಾ ಸಿಬ್ಬಂದಿಗಳು ಯಾರೊಬ್ಬರೂ ಕೂಡಾ ಈ ಪತ್ರವನ್ನು ಬರೆದಿಲ್ಲ ಹಾಗೆಯೇ ಇನ್ಸ್ಪೆಕ್ಟರ್ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿಯನ್ನು ಕೂಡಾ ಹಿರಿಯ ಅಧಿಕಾರಿಗಳ ಮುಂದೆ ಹೇಳಿಕೊಂಡಿಲ್ಲ.
ಅಷ್ಟೇ ಅಲ್ಲದೇ ಖುದ್ದು ಕಮಿಷನರ್ ಎನ್ ಶಶಿಕುಮಾರ್ ಅವರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ತೆರಳಿ ಅಲ್ಲಿರುವ ಮಹಿಳಾ ಕಾನ್ಸ್ಟೇಬಲ್ ಗಳನ್ನು ವಿಚಾರಣೆ ಮಾಡಿದಾಗ ಅವರು ಕೂಡಾ ಇನ್ಸ್ಪೆಕ್ಟರ್ ಸುರೇಶ ಯಳ್ಳೂರ್ ಅವರ ಬಗ್ಗೆ ಯಾವುದೇ ದೂರನ್ನು ನೀಡಿಲ್ಲ ಎಂಬ ಮಾಹಿತಿ ನೀಡಿಲ್ಲ ಎಂಬ ಮಾಹಿತಿಯನ್ನು ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಸದ್ಯ ಎರಡು ಬಣಗಳ ನಡುವಿನ ವಿಚಾರಕ್ಕೇ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ಹೆಸರು ಕೆಡಿಸಲು ಈ ರೀತಿಯ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಅಂಶಗಳು ಕಂಡು ಬಂದಿದೆ. ಸದ್ಯ ಈ ಪತ್ರವನ್ನು ವೈರಲ್ ಮಾಡಿದ್ದು ಇದರಲ್ಲಿ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಮಾಡಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಗಮನಿಸಿ
- Teacher suspended/ವಿದ್ಯಾರ್ಥಿಗೆ ಥಳಿಸಿದ ಪ್ರಕರಣ : ಶಿಕ್ಷಕಿ ಅಮಾನತು.
- Varamahalakshmi Festival, ಶ್ರಾವಣದ ಶುಕ್ರವಾರ, ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಭಕ್ತಿ ಸಡಗರ
- Teacher/ಪಾಠ ಕಲಿಯಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಥಳಿತ : ಬಾಸುಂಡೆ ಮೂಡಿಸಿದ ಶಿಕ್ಷಕಿ
- ಭಟ್ಕಳದ ಹಳೆಯ ಕಾಲ ಮುಕ್ತಾಯ – ನಗರಸಭೆಯ ಹೊಸ ಯುಗ ಆರಂಭ ! ಮಂಕಾಳು ವೈದ್ಯ ಸಚಿವರಾದ ಬಳಿಕ ಭಟ್ಕಳಿಗರ ಕನಸು ನನಸು