ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಬೆಳಗಾವಿಯ ಸುವರ್ಣ ಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿ ಟಿ. ರವಿ ಅವರ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ವಿಧಾನ ಪರಿಷತ್ ಶಾಸಕರಾದ ಗಣಪತಿ ಉಳ್ವೇಕರ ಅವರು ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಶಾಸಕರಾದ ಸಿ. ಟಿ. ರವಿ ಅವರ ಬಗ್ಗೆ ನಡೆದುಕೊಂಡ ರೀತಿ ಗೂಂಡಾ ರಾಜ್ಯದಂತೆ ಭಾಸವಾಗುತ್ತಿದೆ.ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಪೊಲೀಸರು ರಾತ್ರಿಯಿಡೀ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸಿದ್ದಾರೆ. ಒಬ್ಬ ಶಾಸಕರನ್ನು ನಡೆಸಿಕೊಂಡ ರೀತಿಯು ತೀರಾ ಬಾಲಿಶವಾದದ್ದು. ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವದು, ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಇದು ತೋರಿಸುತ್ತದೆ.
ಗೌರವಾನ್ವಿತ ಸಚಿವೆ ಬಗ್ಗೆ ಸಿ. ಟಿ. ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ,ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು.ಎಲ್ಲದ್ದಕ್ಕೂ ಡಾ. ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ.
ಸರ್ಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವ ಬಗ್ಗೆ ಗಣಪತಿ ಉಳ್ವೇಕರ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಗಮನಿಸಿ