ಸುದ್ದಿಬಿಂದು ಬ್ಯೂರೋ ವರದಿ
ನವದೆಹಲಿ:ಅನಾರೋಗ್ಯಕ್ಕೆ ಒಳಗಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಇಂದು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು.2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು.ಅವರು ಈ ಹಿಂದೆ 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು.
ಮನಮೋಹನ್ ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಮತ್ತು 2009 ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದರು.
ಗಮನಿಸಿ
- ಅನಂತಕುಮಾರ ಹೆಗಡೆ ಸೇರಿ ನಾಲ್ವರ ವಿರುದ್ಧ FIR : ಸಿಂಗಾಪುರ ಹಾರಿದ ಹೆಗಡೆ..!
- ಇಂದು ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ
- ಅನಂತಕುಮಾರ ಹೆಗಡೆ ಬೆಂಬಲಿಗರಿಂದ ಹೆದ್ದಾರಿಯಲ್ಲೆ ಹಲ್ಲೆ
- ಪೊಲೀಸರ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು : ಎಸ್ಪಿ ಎಂ ನಾರಾಯಣ