ಕಾರವಾರ: ಹೊಸ ವರ್ಷ ಆಚರಣೆ ನೆಪ ಬಳಸಿಕೊಂಡು ಸೈಬರ್ ಕ್ರಿಮಿನಲ‌್‌ನಗಳು ಮೊಬೈಲ್‌ಗಳಿಗೆ ಅಪಾಯಕಾರಿ ಲಿಂಕ್, APK ಫೈಲ್ ಕಳುಹಿಸಿ ಮೊಬೈಲ್ ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ.
ತಮ್ಮ ಮೊಬೈಲ್‌ಗೆ ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು, APK ಫೈಲ್‌ಗಳನ್ನು ವಾಟ್ಸ್ ಆ್ಯಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿ ಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿ . ಯಾವುದೇ ಕಾರಣಕ್ಕೂ ಇಂತಹಾ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡಬೇಡಿ. ಹಾನಿಕಾರಕ ಲಿಂಕ್ ಮತ್ತು APK ಫೈಲ್ ವಾಟ್ಸ್ ಆ್ಯಪ್ ಗ್ರೂಪ್ ಗಳಿಗೆ ನಿಮ್ಮ ಪರಿಚಿತ ವಾಟ್ಸ್‌ಆ್ಯಪ್‌ನಿಂದ ಪೋಸ್ಟ್ ಮಾಡಿದಲ್ಲಿ ಆಯಾ ಗ್ರೂಪ್ ಅಡ್ಮಿನ್ ಗಳು ಅಂತಹ ಲಿಂಕ್, ಫೈಲ್ ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಪೊಲೀಸ್ ಇಲಾಖೆ ಎಚ್ಚರಿಸಿದೆ..
ಏನಾಗಬಹುದು?
2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಮೊಬೈಲ್ ಗಳಿಗೆ ಸೈಬರ್ ಕ್ರಿಮಿನಲ್‌ನಗಳಯ ಹಾನಿಕಾರಕ ಲಿಂಕ್, ಅಪ್ಲಿಕೇಶನ್ ಗಳನ್ನು ಕಳುಹಿಸಿ ಬಳಿಕ ಅವರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ಅವರ ವಾಟ್ಸ್ ಆ್ಯಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇದೆ.
ಗಮನಿಸಿ
- Teacher suspended/ವಿದ್ಯಾರ್ಥಿಗೆ ಥಳಿಸಿದ ಪ್ರಕರಣ : ಶಿಕ್ಷಕಿ ಅಮಾನತು.
- Varamahalakshmi Festival, ಶ್ರಾವಣದ ಶುಕ್ರವಾರ, ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಭಕ್ತಿ ಸಡಗರ
- Teacher/ಪಾಠ ಕಲಿಯಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಥಳಿತ : ಬಾಸುಂಡೆ ಮೂಡಿಸಿದ ಶಿಕ್ಷಕಿ
- ಭಟ್ಕಳದ ಹಳೆಯ ಕಾಲ ಮುಕ್ತಾಯ – ನಗರಸಭೆಯ ಹೊಸ ಯುಗ ಆರಂಭ ! ಮಂಕಾಳು ವೈದ್ಯ ಸಚಿವರಾದ ಬಳಿಕ ಭಟ್ಕಳಿಗರ ಕನಸು ನನಸು