ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ : ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿ ಲಾರಿ ಪಲ್ಟಿಯಾಗಿ ಇಬ್ಬರೂ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಡರಾತ್ರಿ ಸಂಭವಿಸಿದೆ.

ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಹೊನ್ನಾವರ ಕಡೆ ಬರುತ್ತಿದ್ದ ಲಾರಿ ಪಲ್ಟಿಯಾಗಿದೆ. ಮೃತರು ಮತ್ತು ಗಾಯಳು ಮೂಲತ ಬಿಹಾರ ರಾಜ್ಯದವರು ಎಂದು ತಿಳಿದುಬಂದಿದೆ. ವಾಹನದಲ್ಲಿದ್ದ 06 ಜನರಲ್ಲಿ ಇಬ್ಬರು ಮೃತ ಪಟ್ಟಿದ್ದು, ಮೂವರು ಗಾಯಳುಗಳನ್ನು ಹೊನ್ನಾವರದ ತಾಲೂಕ ಸರಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ

ಗಮನಿಸಿ