ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ರಾಸಾಯನಿಕ ಸೋರಿಕೆಯಿಂದ 12ಮಂದಿ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ಬಿಣಗಾದಲ್ಲಿನ ಆದಿತ್ಯ ಬಿರ್ಲ ಕಂಪನಿಯಲ್ಲಿ ನಡೆದಿದೆ.

ಆದಿತ್ಯ ಬಿರ್ಲಾ ಕಂಪನಿಯ 12ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಎಲ್ಲಾ ಕಾರ್ಮಿಕರನ್ನ ಕಾರವಾರದ ಜಿಲ್ಲಾ‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌. ಸ್ಥಳಕ್ಕೆ ಕಂಪನಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಅನೇಕ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರನ್ನುವ ಮಾಹಿತಿ ಲಭ್ಯವಾಗಿದೆ.ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗಮನಿಸಿ