ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದಲ್ಲಿ 19ಮಂದಿ ಗಾಯಗೊಂಡಿದ್ದಾರೆ.
ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ 3 ಲಕ್ಷ ರೂ. ಪರಿಹಾರದ ಮೊತ್ತ ಘೋಷಿಸಲಾಗಿದೆ.
ಅಪಘಾತದಲ್ಲಿ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ