ಸುದ್ದಿಬಿಂದು ಬ್ಯೂರೋ ವರದಿ (Suddibindu Digital News)
ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಮರಕ್ಕೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಈ ಅಪಘಾತ ದಾವಣಗೆರೆ ತಾಲೂಕಿನ ಅನಗೋಡು ಮತ್ತು ಶಿವಪುರ ರಸ್ತೆಯ ನಡುವೆ ಸಂಭವಿಸಿದೆ. ದಾವಣಗೆರೆಯ ಜೈನ್ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ಬಸ್ ಅಪಘಾತಕ್ಕೊಳಗಾಗಿದೆ. ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಕೊಂಡೊಯ್ಯುವಾಗ, ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಸ್ಥಳೀಯರು ಕೂಡಲೇ ಮಕ್ಕಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ