ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಚುನಾವಣೆ ನಡೆಯದೆ ಇದ್ದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಿಗೆ ಕೊನೆಗೂ ಕಾಲ ನಿಗದಿಯಾಗಿದೆ.
ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಇಂದು ಹೈಕೋರ್ಟಿಗೆ ಸ್ಪಷ್ಟಪಡಿಸಿದ್ದು, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳು ಮೇ ಬಳಿಕ ನಡೆಯಲಿವೆ.ರಾಜ್ಯ ಚುನಾವಣಾ ಆಯೋಗವು ಮೂರು ವರ್ಷಗಳ ಕಾಲ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳು ನಡೆಯದ ಹಿನ್ನೆಲೆ ಹೈಕೋರ್ಟಿನಲ್ಲಿ ನ್ಯಾಗಂಗ ನಿಂದನೆ ಅರ್ಜಿ ವಿಚಾರಣೆ ನಡೆಸಲಾಗುತ್ತಿತ್ತು.. ಈ ಅರ್ಜಿಯ ವಿಚಾರಣೆ ಇಂದು (ಫೆಬ್ರವರಿ 17) ನಡೆದಿದ್ದು. ಈ ವೇಳೆ, ಚುನಾವಣೆಗಳು ಮೇ ಬಳಿಕ ನಡೆಯಲಿವೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ತಿಳಿಸಿದ್ದಾರೆ. ಈ ಹೇಳಿಕೆಯನ್ನು ದಾಖಲಿಸಿಕೊಂಡ ಹೈಕೋರ್ಟು ಅರ್ಜಿಯನ್ನು ವಜಾಗೊಳಿಸಿದೆ.
ರಾಜ್ಯ ಸರ್ಕಾರವು ಮೂರು ವರ್ಷಗಳಿಂದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಹೈಕೋರ್ಟಿನಲ್ಲಿ ಅವಮಾನ ಅರ್ಜಿ ಸಲ್ಲಿಸಿತ್ತು.
ಈ ಕುರಿತು ಹೈಕೋರ್ಟ್ ಇಂದು ವಿಚಾರಣೆ ನಡೆಸಿದಾಗ, ಸರ್ಕಾರ ಮೀಸಲಾತಿ ಪಟ್ಟಿಯನ್ನು ಒದಗಿಸಿದರೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಹಿರಿಯ ವಕೀಲ ಕೆ. ಎನ್. ಫಣೀಂದ್ರ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೇ ತಿಂಗಳೊಳಗೆ ಮೀಸಲಾತಿ ಪಟ್ಟಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು. ಆದರೂ, ಮೇ ಅಂತ್ಯದೊಳಗೆ ಚುನಾವಣೆ ಆಯೋಗಕ್ಕೆ ಮೀಸಲಾತಿ ಪಟ್ಟಿ ನೀಡಲಾಗುವುದು. ಚುನಾವಣಾ ಆಯೋಗವು ಜೂನ್ ಅಥವಾ ಜುಲೈನಲ್ಲಿ ಚುನಾವಣೆ ನಡೆಸಬಹುದು ಎಂದು ಹೇಳಿದೆ.
ಮುಖ್ಯ ನ್ಯಾಯಾಧೀಶ ಎನ್.ವಿ. ಅಂಜರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ಈ ವಿಚಾರಣೆಯನ್ನು ನಡೆಸಿತು.
ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಕುರಿತು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಮತ್ತು ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವ ಕುರಿತಾಗಿ ಹೈಕೋರ್ಟ್ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ, ಸರ್ಕಾರ ಶೀಘ್ರವಾಗಿ ಮೀಸಲಾತಿ ಪಟ್ಟಿಯನ್ನು ಒದಗಿಸಿ ಚುನಾವಣೆಯನ್ನು ನಡೆಸಲು ಅನುಮತಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿತ್ತು.
ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ತಯಾರಿ ಆರಂಭಿಸಲು ಕಾರ್ಯಕರ್ತರಿಗೆ ಸೂಚಿಸಿದರು. ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ 50% ಆಸನ ನೀಡುವ ಉದ್ದೇಶದಿಂದ ಪಕ್ಷವು ಮೈತ್ರಿ ಒಪ್ಪಂದಗಳನ್ನು ಮಾಡುತ್ತಿದ್ದು, ಅಭ್ಯರ್ಥಿಗಳ ಅಂತಿಮ ಪಟ್ಟಿಗಳನ್ನು ತಯಾರಿಸುತ್ತಿದೆ ಎಂದು ಹೇಳಿದರು.
ಈ ಹಿಂದಿನ ಬೆಳವಣಿಗೆಯ ಅನಂತರ, ಸರ್ಕಾರದ ಪರ ವಕೀಲರು ಈಗ ಮೇ ನಂತರ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ. ಇದರಿಂದಾಗಿ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳಲು ಪ್ರಾರಂಭವಾಗಿದೆ.
ಇದನ್ನೂ ಓದಿ