ಸುದ್ದಿಬಿಂದು ಬ್ಯೂರೋ ವರದಿ(suddibindu digital news)
ತುಮಕೂರು : ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಭೈರಾಪುರ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿ ಭೈರಾಪುರ ಗ್ರಾಮದ ಜಯರಾಮ ಅವರ ಪುತ್ರ ರಾಹುಲ್ (16) ಎಂದು ಗುರುತಿಸಲಾಗಿದೆ. ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಸರಕಾರಿ ಹೈಸ್ಕೂಲ್ (GHS) ನಲ್ಲಿ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ. ನಿನ್ನೆ ಶುಕ್ರವಾರ ಶಾಲೆಯಿಂದ ಮನೆಗೆ ಹಿಂದಿರುಗಿದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.

ತಕ್ಷಣ ರಾಹುಲ್‌ನ ತಂದೆ-ತಾಯಿ ಅವರನ್ನು ಹೂಳಿಯಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಹುಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಪುತ್ರನನ್ನು ಕಳೆದುಕೊಂಡ ಪೋಷಕರ ಮನೆಯಲ್ಲಿ. ಆಕ್ರಂದನ ಮುಗಿಲು ಮುಟ್ಟಿದೆ.ಈ ಘಟನೆ ಹುಳಿಯಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ..

ಇದನ್ನೂ ಗಮನಿಸಿ