ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನದ ನಾಯಕ ಮೊಹಮ್ಮದ್ ರಿಜ್ವಾನ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಜಸ್ಪ್ರೀತ್ ಬೂಮ್ರಾ ಗಾಯದ ಕಾರಣದಿಂದ ಈ ಪಂದ್ಯದಿಂದ ಹೊರಗುಳಿದಿದ್ದರೂ, ತಂಡಕ್ಕೆ ಬಲ ತುಂಬಲು ದುಬೈಗೆ ಆಗಮಿಸಿದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಜಯಭೇರಿ ಬಾರಿಸಿದ ನೆನಪುಗಳಿವೆ. ಆ ಸಂದರ್ಭದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆ ಮಾಡಿದ್ದೂ, ಫಖರ್ ಜಮಾನ್ (114 ರನ್) ಶತಕ ಬಾರಿಸಿದ್ದೂ, ಭಾರತದ ಸೋಲಿಗೆ ಕಾರಣವಾಯಿತು. ಆದರೆ ಕಳೆದ ಬುಧವಾರ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಸೋಲು ಕಂಡಿತ್ತು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ ಪಟೇಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಾಮಿ, ಕುಲ್ದೀಪ್ ಯಾದವ್.

ಪಾಕಿಸ್ತಾನ ತಂಡ: ಇಮಾಮ್-ಉಲ್-ಹಕ್, ಬಾಬರ್ ಆಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ನಾಯಕ), ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಪ್ಟಿಲ್ ಶಾ, ಶಾಹೀನ್ ಆಫ್ರಿದಿ, ನಸೀಮ್ ಶಾ, ಹರಿಸ್ ರೌಫ್, ಅಬ್ರಾರ್ ಅಹ್ಮದ್.

ಇದನ್ನೂ ಓದಿ