ದುಬೈನಲ್ಲಿ ನಡೆದ ಈ ರೋಮಾಂಚಕ ಪಂದ್ಯದಲ್ಲಿ ಪಾಕಿಸ್ತಾನ್ ಮೊದಲು ಬ್ಯಾಟಿಂಗ್ ಮಾಡಿ 240 ರನ್‌ಗೆ ಆಲೌಟ್ ಆಯಿತು. ಪಾಕಿಸ್ತಾನದ ಪರ ಸೌದ್ ಶಕೀಲ್ ಅರ್ಧಶತಕ (50) ಹೊಡೆದರೆ, ರಿಜ್ವಾನ್ 46 ರನ್ ಗಳಿಸಿದರು. ಇವರ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ಸಾಧಾರಣ ಗುರಿಯನ್ನು ಹೊಂದಿತು.

ಈ ಗುರಿಯನ್ನು ಬೆನ್ನತ್ತಿದ ಭಾರತ, ವಿರಾಟ್ ಕೊಹ್ಲಿಯ ಶತಕ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕದ ನೆರವಿನಿಂದ 6 ವಿಕೆಟ್ ಜಯ ಸಾಧಿಸಿ, ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ವಿರಾಟ್ ಕೊಹ್ಲಿ ಹೊಸ ದಾಖಲೆ
ಭಾರತದ ತಾರೆ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ಬರೆಯಿದ್ದಾರೆ. ಪಾಕಿಸ್ತಾನದ ವಿರುದ್ಧದ ಈ ಪಂದ್ಯದಲ್ಲಿ ಕೇವಲ 14 ರನ್ ಗಳಿಸುವ ಮೂಲಕ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಟಾಸ್ ಗೆದ್ದ ಪಾಕಿಸ್ತಾನ್ ಮೊದಲು ಬ್ಯಾಟ್ ಮಾಡಿ 241 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಭಾರತ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಜಯ ಸಾಧಿಸಿತು. ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ (20) ಮತ್ತು ಶುಭ್ಮನ್ ಗಿಲ್ (46) ಪೆವಿಲಿಯನ್‌ಗೆ ಮರಳಿದರು. ಶ್ರೇಯಸ್ ಅಯ್ಯರ್ 56 ರನ್ ಗಳಿಸಿ ಔಟಾದರು.

ರೋಹಿತ್‌ನ ಬಳಿಕ ಬ್ಯಾಟಿಂಗ್‌ಗೆ ಬಂದ ವಿರಾಟ್ ಕೊಹ್ಲಿ ಅದ್ಭುತ ಶತಕ ಬಾರಿಸಿ ಹೊಸ ದಾಖಲೆ ನಿರ್ಮಿಸಿದರು. ಈ ಪಂದ್ಯದಲ್ಲಿ 15 ರನ್ ಗಳಿಸುವ ಮೂಲಕ ಒಡಿಐ ಕ್ರಿಕೆಟ್‌ನಲ್ಲಿ 14,000 ರನ್‌ಗಳನ್ನು ಪೂರೈಸಿದರು. ಇದರಿಂದಾಗಿ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದರು.

ದಾಖಲೆ ಸೃಷ್ಟಿಸಿದ ಕೊಹ್ಲಿ
ವಿರಾಟ್ ಈ ಮೈಲಿಗಲ್ಲನ್ನು 287 ಇನ್ನಿಂಗ್ಸ್‌ಗಳಲ್ಲಿ ತಲುಪಿದರು. ಇದರೊಂದಿಗೆ ಒಡಿಐಗಳಲ್ಲಿ 14,000 ರನ್ ಪೂರೈಸಿದ ವೇಗವೇಗದ ಆಟಗಾರ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡರು. ಒಡಿಐಗಳಲ್ಲಿ 14,000+ ರನ್ ಗಳಿಸಿದ ಮೂರನೇ ಬ್ಯಾಟ್ಸ್‌ಮನ್ ಆಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿ ಇತ್ತು, ಅವರು ಇದನ್ನು 350 ಇನ್ನಿಂಗ್ಸ್‌ಗಳಲ್ಲಿ ಸಾಧಿಸಿದ್ದರು. ಶ್ರೀಲಂಕಾದ ಬ್ಯಾಟ್ಸ್‌ಮನ್ ಈ ಮೈಲಿಗಲ್ಲನ್ನು ತಲುಪಲು 378 ಇನ್ನಿಂಗ್ಸ್ ತೆಗೆದುಕೊಂಡಿದ್ದರು.

ಕ್ಯಾಚ್ ದಾಖಲೆ
ಏಕದಿನ ಪಂದ್ಯದಲ್ಲಿ ಭಾರತ ಪರ ಅತಿ ಹೆಚ್ಚು ಕ್ಯಾಚ್ ಹಿಡಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಕೊಹ್ಲಿ ತನ್ನದಾಗಿಸಿಕೊಂಡಿದ್ದಾರೆ. ಮೊದಲು ಮೊಹಮ್ಮದ್ ಅಜಾರುದ್ದೀನ್ 156 ಕ್ಯಾಚ್‌ನ ದಾಖಲೆಯೊಂದಿಗೆ ಮುಂಚೂಣಿಯಲ್ಲಿದ್ದರು. ಆದರೆ, ಕೊಹ್ಲಿ 157 ಕ್ಯಾಚ್ ಮುರಿದು ಹೊಸ ದಾಖಲೆ ನಿರ್ಮಿಸಿದರು.

ಹರ್ಷಿತ್ ರಾಣಾ ಬೌಲಿಂಗ್‌ನಲ್ಲಿ ಖುಷ್ದಿಲ್ ಶಾ ಔಟಾಗುವಾಗ, ಡೀಪ್ ಮಿಡ್‌ವಿಕೆಟ್‌ನಲ್ಲಿ ಕೊಹ್ಲಿ 158ನೇ ಕ್ಯಾಚ್ ಹಿಡಿದರು. ಅಜಾರುದ್ದೀನ್ 1985 ರಿಂದ 2000ರವರೆಗೆ 334 ಏಕದಿ‌ನ ಪಂದ್ಯದಲ್ಲಿ 156 ಕ್ಯಾಚ್ ಹಿಡಿದಿದ್ದರು.

ಇದನ್ನೂ ಓದಿ