ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಕರ್ನಾಟಕ ರಾಜ್ಯ ಒಪ್ಪಂದದ ನರ್ಸಸ್ ಉದ್ಯೋಗಿಗಳ ಕಲ್ಯಾಣಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ರಾಧಾ ಸುರೇಶ್ ಪಿ.ಎನ್ ಅವರು ನರ್ಸ್ಗಳಿಗೆ ಮೂಲ ವೇತನ ನೀಡದಿದ್ದರೆ ಗಾಂಧಿ ದಂಡಿಯ ಸತ್ಯಾಗ್ರಹ ದಿನದಂದು ನಾವು ಸಾಮೂಹಿಕ ರಾಜೀನಾಮೆ ನೀಡುವೆವು ಎಂದು ಎಚ್ಚರಿಸಿದ್ದಾರೆ.
ಈ ಸಂಬಂಧ ಅವರು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ನಗರದಲ್ಲಿ ಫ್ರೀಡಂ ಪಾರ್ಕ್ನಲ್ಲಿ ಸಂಘಟನೆ ಆಯೋಜಿಸಿದ್ದ ಅನಿರ್ಧಿಷ್ಟ ಅವಧಿಯ ಉಪವಾಸ ಸತ್ಯಾಗ್ರಹಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ನಾಳೆ ನರ್ಸ್ಗಳ ಬೇಡಿಕೆಗಳನ್ನು ಪೂರೈಸಲು ಸಭೆ ನಡೆಯಲಿದೆ. ಈ ಮೊದಲು ನಡೆದ ಪ್ರತಿಭಟನೆ ವೇಳದ ಸಚಿವರ ಭರವಸೆಯ ಮೇರೆಗೆ ಉಪವಾಸ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿತ್ತು..
ನಾಳೆ ನಡೆಯುವ ಮಹತ್ವದ ಸಭೆಯಲ್ಲಿ ನರ್ಸ್ಗಳ ‘ಮೂಲ ವೇತನ’ ಸೇರಿದಂತೆ ಇತರ ಬೇಡಿಕೆಗಳನ್ನು ಪೂರೈಸದಿದ್ದರೆ, ಮಾರ್ಚ್ 12 ರಂದು ಗಾಂಧಿ ದಂಡಿಯ ಸತ್ಯಾಗ್ರಹ ದಿನದಂದು ಮುಖ್ಯಮಂತ್ರಿಗೆ ನಮ್ಮ ಸಾಮೂಹಿಕ ರಾಜೀನಾಮೆ ಸಲ್ಲಿಸಿ, ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ