ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ,: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳು ಮತ್ತು ಪುರಸಭೆ ಅಂಕೋಲಾ ವ್ಯಾಪ್ತಿಗೊಳಪಟ್ಟ ಕೇಣಿ ಗ್ರಾಮದಲ್ಲಿ Geotechnical Investigation Work ಕಾಮಗಾರಿ ಸಂಬಂಧ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಾರ್ಚ್ 11 ರ ಬೆಳಗ್ಗೆ 6 ಗಂಟೆಯಿoದ ಮಾರ್ಚ್ 15 ರ ಸಂಜೆ 6 ಗಂಟೆಯ ವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ನಿಬಂಧನಗೊಳಪಟ್ಟು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದಾರೆ.

ನಿಬಂಧನೆಗಳು: ಗರಿಷ್ಠ್ಠ/ಕನಿಷ್ಠ 5 ಹಾಗೂ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಧರಣಿ ಹಾಗೂ ಪ್ರತಿಭಟನೆ ಉದ್ದೇಶಕ್ಕೆ ಸೇರುವುದನ್ನು ಹಾಗೂ ಸಾರ್ವಜನಿಕರಿಗೆ ತೊಂದರೆಯುoಟಾಗುವoತೆ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿಗಳು/ಗುಂಪುಗಳು ಆಯುಧ, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಕುಡುಗೋಲುಗಳು. ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುoಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಇದನ್ನೂ ಓದಿ