ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಾ ಘಟಕದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪ್ರಮೋದ ನಾಯ್ಕ ಅವರು ಆಯ್ಕೆಗೊಂಡಿದ್ದಾರೆ.

ಪ್ರಮೋದ ರಾಮಕೃಷ್ಣ ನಾಯ್ಕ ಮೂಲತಃ ಕೋನಳ್ಳಿಯ ಗ್ರಾಮದವರಾಗಿದ್ದು ಮನೋವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬಿಎಡ್ ಪದವಿ ಪಡೆದಿರುತ್ತಾರೆ. ಡಾ.ಎ.ವಿ. ಬಾಳಿಗಾ ಕಾಲೇಜಿನಲ್ಲಿ ಕಳೆದ 21 ವರ್ಷಗಳಿಂದ ಮನೋವಿಜ್ಞಾನ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿ ದೆಹಲಿಯಲ್ಲಿ ನಡೆದ ಎನ್. ಸಿ. ಸಿ.ರಾಜಪತ್ ಪರೇಡ್ ಕ್ಯಾಂಪನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಹೆಗ್ಗಳಿಕೆ ಇವರದ್ದಾಗಿದೆ. ಹಲವು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಕಾರ್ಯಗಾರರಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ನಾಯಕತ್ವ ತರಬೇತಿ, ರಕ್ತದಾನ ಶಿಬಿರ ಸಂಘಟಿಸಿದ ಅನುಭವ ಇವರಿಗಿರುತ್ತದೆ.

ಈ ಹಿಂದೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ, ಕರಾವಳಿ ಪ್ರಗತಿಪರ ಹೋರಾಟ ವೇದಿಕೆ ಹಾಗೂ ವಿವೇಕಾನಂದ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ಅಧ್ಯಕ್ಷ ರಾಗಿ ಕಾರ್ಯನಿರ್ವಹಿಸುತ್ತಾರೆ.ಈಗ ತೆರವಾದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಇವರ ಕ್ರಿಯಾಶೀಲತೆಗೆ ಸಂದ ಗೌರವವಾಗಿದೆ.

ಇದನ್ನೂ ಓದಿ