ಸುದ್ದಿಬಿಂದು ಬ್ಯೂರೋ‌ ವರದಿ
ಶಿರಸಿ: ನಗರದಲ್ಲಿ‌ ನಿರ್ಮಾಣವಾದ ನೂತನ ಬಸ್ ನಿಲ್ದಾಣ ಕಾಮಗಾರಿ ಮುಕ್ತಾಯವಾಗಿ 6-7ತಿಂಗಳ ಕಳೆದರು ಉದ್ಘಾಟನೆ ಆಗದಿರುವುದನ್ನ‌ ಖಂಡಿಸಿ ಇಂದು ನಡೆಸಬೇಕಿದ್ದ ಪ್ರತಿಭಟನೆಯನ್ನ ತಾತ್ಕಾಲಿಕವಾಗಿ ಕೈ ಬಿಟ್ಟಿರುವುದಾಗಿ ಬಿಜೆಪಿ ಮುಖಂಡ ಅನಂತ ಮೂರ್ತಿ ಹೆಗಡೆ ತಿಳಿಸಿದ್ದಾರೆ.

ಈ ಹಿಂದೆ ಬಿಜೆಪಿ ಸರಕಾರದಲ್ಲಿ ಶಿರಸಿ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆ ಅವರ ಅವಧಿಯಲ್ಲಿ ಹಳೆ ಬಸ್ ನಿಲ್ದಾಣವನ್ನ ನೆಲಸಮ‌ ಮಾಡಿ ಹೊಸ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಅಂದಿನಿಂದ ಕಾಮಗಾರಿ ಆಮೇ ಗತಿಯಲ್ಲೇ ಸಾಗಿತ್ತು.‌ಬಳಿಕ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾಮಗಾರಿ ವೇಗ ಪಡೆದು ಇದೀಗ ಕಳೆದ‌ ಆರೇಳು ತಿಂಗಳ ಹಿಂದೆ ಬಹುತೇಕ‌ ಕಾಮಗಾರಿ ಪೂರ್ಣಗೊಂಡಿದೆ.‌

ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಂಡರು ಪ್ರಯಾಣಿಕರ ಅನುಕೂಲಕ್ಕೆ ಲಭ್ಯವಾಗಿರಲಿಲ್ಲ. ಹೀಗಾಗಿ ಬಸ್ ನಿಲ್ದಾಣದ ಕಾಮಗಾರಿ ಮುಗಿದು ಅರ್ಧ ವರ್ಷ ಕಳೆದರು ಸೌಲಭ್ಯಕ್ಕೆ ಲಭ್ಯವಾಗದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಅವರು ಬಸ್ ನಿಲ್ದಾಣ ಉದ್ಘಾಟನೆಗೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಇದೀಗ ಮಾರ್ಚ್ 26-27ರಂದು ಬಸ್ ನಿಲ್ದಾಣ ಉದ್ಘಾಟನೆ ಮಾಡುವುದಾಗಿ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅವರು ನಿನ್ನೆಯಷ್ಟೆ ಪತ್ರಿಕಾಗೋಷ್ಠಿ ನಡೆಸಿರುವ ಹಿನ್ನಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ ಪ್ರತಿಭಟನೆಯನ್ನ ತಾತ್ಕಾಲಿಕವಾಗಿ ಕೈ ಬಿಡಲಾಗಿದೆ. ಒಂದು ವೇಳೆ ಆ ಸಮಯದಲ್ಲಿಯೂ ಬಸ್ ನಿಲ್ದಾಣ ಉದ್ಘಾಟನೆಗೊಳ್ಳದೆ ಇದಲ್ಲಿ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ..

ಇದನ್ನೂ ಓದಿ