ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಸತ್ಯಸಾಯಿ ಬಾಬಾ ಅವರ ಪರಮ ಭಕ್ತರಾಗಿ, ಶಿಕ್ಷಕರಾಗಿ ಅದೆಷ್ಟೋ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ನಿವೃತ್ತ ಮುಖ್ಯಾಧ್ಯಾಪಕ ವಿ.ವಿ. ಫಾತರಫೇಕರ ನಿಧನರಾಗಿರುವುದು ತೀವ್ರ ದುಃಖವನ್ನು ಉಂಟುಮಾಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ಸಂತಾಪ ಸೂಚಿಸಿದ್ದಾರೆ.
ಸತ್ಯಸಾಯಿ ಸೇವಾ ಸಂಸ್ಥೆಗಳ ನಿಕಟಪೂರ್ವ ಜಿಲ್ಲಾಧ್ಯಕ್ಷರಾಗಿ ಸಹಸ್ರ ಸಹಸ್ರ ಜನರಿಗೆ ಕಾರುಣ್ಯದ ನೀರೆರೆದ ಅವರು ನಮ್ಮೆಲ್ಲರಿಗೆ ಮಾರ್ಗದರ್ಶಕರಾಗಿದ್ದರು.ಮಾದರಿಯಾಗಿದ್ದರು.
ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ