ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ಗ್ಯಾಸ್ ಸಿಲೆಂಡರ್ ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಆಲೂರು – ಕರ್ಕಾ ಮಧ್ಯೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ವಿನಾಯಕ ಚ್ಯಾಟಿ ಎಂಬಾತ ಗಾಯಗೊಂಡ ಚಾಲಕನಾಗಿದ್ದಾನೆ. ಅಪಘಾತದಲ್ಲಿ ಈತ ವಾಹನದೊಳಗಡೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳೀಯರು ವಾಹನದ ಬಾಗಿಲು ಮುರಿದು ಈತನನ್ನು ವಾಹನದಿಂದ ಹೊರ ತೆಗೆದಿದ್ದಾರೆ. ತಕ್ಷಣವೇ ಈತನನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ 108 ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಇದನ್ನೂ ಓದಿ